‘ಸ್ಥಳೀಯ ಸಂಸ್ಥೆ ಚುನಾವಣೆಯ ಬಳಿಕ ಸಂಪುಟ ವಿಸ್ತರಣೆ’

7
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೆ

‘ಸ್ಥಳೀಯ ಸಂಸ್ಥೆ ಚುನಾವಣೆಯ ಬಳಿಕ ಸಂಪುಟ ವಿಸ್ತರಣೆ’

Published:
Updated:

ಬೆಂಗಳೂರು: ‘ಸ್ಥಳೀಯ ಸಂಸ್ಥೆ ಚುನಾವಣೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆ ಯಲಿದೆ’ ಎಂದು ಕಾಂಗ್ರೆಸ್‌ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅದೆಲ್ಲವೂ ಮುಗಿದ ಬಳಿಕ ಸಂಪುಟ ವಿಸ್ತರಣೆ ಮಾಡೋಣ. ಸದ್ಯ ನಾವು ದೆಹಲಿಗೆ ಹೋಗುತ್ತಿಲ್ಲ. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಕರೆದಾಗ ಹೋಗುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

ಆತಂಕದ ಛಾಯೆ:  ದೇಶದ ಮೂಲ ಸಿದ್ಧಾಂತಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಮೂಲಭೂತ ಸ್ವಾತಂತ್ರವನ್ನು ಕಿತ್ತುಕೊಳ್ಳುವ ಕೆಲಸ ನಡೆದಿದೆ. ಈ ಧೋರಣೆಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.

‘125 ಕೋಟಿ ಜನರಿಗೆ ಮೋದಿ ಪ್ರಧಾನಿಯಾಗಬೇಕು. ಆದರೆ ದಲಿತರು, ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ದೇಶದ ಮೌಲ್ಯ, ಸಿದ್ಧಾಂತಗಳ ವಿರುದ್ಧ ಕೇಂದ್ರ ಸರ್ಕಾರ ಹೋಗುತ್ತಿದೆ’ ಎಂದರು.

‘ಮತ್ತೆ ಸರಿಯಾದ ದಿಕ್ಕಿನಲ್ಲಿ ದೇಶವನ್ನು ಕೊಂಡೊಯ್ಯಬೇಕಿದೆ. ದುಷ್ಟ ಪಕ್ಷಗಳು, ಸಂಘಟನೆಗಳ ವಿರುದ್ಧ ಹೋರಾಡಬೇಕಿದೆ’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !