ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಸಿಎಂ ರಾಜಕೀಯ ಕಾರ್ಯದರ್ಶಿಗೆ ಸಂಪುಟ ದರ್ಜೆ ಸ್ಥಾನಮಾನ: ಪಿಐಎಲ್ ವಜಾ

Published 7 ಸೆಪ್ಟೆಂಬರ್ 2023, 13:01 IST
Last Updated 7 ಸೆಪ್ಟೆಂಬರ್ 2023, 13:01 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ. ಗೋವಿಂದರಾಜ್, ಮುಖ್ಯಮಂತ್ರಿ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನೇಮಕಾತಿ ಹಾಗೂ ಇವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಸಚಿವರನ್ನು ಹೊರತುಪಡಿಸಿ ಇತರರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಬಾರದು ಎಂದು ಎಲ್ಲಿಯೂ ಹೇಳಿಲ್ಲ. ಪ್ರತಿವಾದಿಗಳಿಗೆ ಯಾವುದೇ ಇಲಾಖೆ ನೀಡಿ ಸರ್ಕಾರದ ಜವಾಬ್ದಾರಿ ವಹಿಸಿಲ್ಲ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT