18 ಶಾಸಕರ ಅಮಾನತು 25ರಂದು ಸಭೆ
ವಿಧಾನಸಭೆಯ ಕಲಾಪದ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿಯ 18 ಶಾಸಕರ ಅಮಾನತು ರದ್ದುಗೊಳಿಸುವ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳಲು ಇದೇ 25ರಂದು ಸಭಾಧ್ಯಕ್ಷರು ಸಭೆ ಕರೆದಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ. ಸಭಾಧ್ಯಕ್ಷರು ಕರೆಯುವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಇತರರು
ಭಾಗವಹಿಸುತ್ತಾರೆ ಎಂದರು.