ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಪಾಲು: ₹9,225 ಕೋಟಿ ಖೋತಾ, ಸಿಎಜಿ ವರದಿಯಲ್ಲಿ ಉಲ್ಲೇಖ

Last Updated 23 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರವು ತೆರಿಗೆ–ಸುಂಕ ಹಾಗೂ ಸಹಾಯಾನುದಾನದ ರೂಪದಲ್ಲಿ ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪಾಲು ವರ್ಷದಿಂದ ವರ್ಷಕ್ಕೆ ಇಳಿಯುತ್ತಿದ್ದು, ಒಂದೇ ವರ್ಷದಲ್ಲಿ ₹9,225 ಕೋಟಿ ಕಡಿಮೆಯಾಗಿದೆ.

‘2019–20ರ ಸಾಲಿಗೆ ಹೋಲಿಸಿ ದರೆ 2020–21ರಲ್ಲಿ ತೆರಿಗೆ–ಸುಂಕದ ಪಾಲಿನಲ್ಲಿ ಶೇ 29.84ರಷ್ಟು ಹಾಗೂ ಸಹಾಯಾನುದಾನದಲ್ಲಿ ಶೇ 12.77 ಕಡಿಮೆಯಾಗಿದೆ’ ಎಂದು ಭಾರತೀಯ ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.

‘2021ರ ಮಾರ್ಚ್‌ಗೆ ಕೊನೆ ಗೊಂಡ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕ ಪರಿಶೋಧನಾ ವರದಿ’ಯಲ್ಲಿ ಈ ಅಂಶ ಪ್ರಸ್ತಾಪಿಸಲಾಗಿದೆ. ಈ ವರದಿಯನ್ನು ವಿಧಾನಮಂಡಲದಲ್ಲಿ ಬುಧವಾರ ಮಂಡಿಸಲಾಯಿತು.

[object Object]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT