ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸವನಹಳ್ಳಿ ಅಪಾರ್ಟ್‌ಮೆಂಟ್ ವರದಿಗೆ ಎನ್‌ಜಿಟಿ ಸೂಚನೆ

Last Updated 24 ಜುಲೈ 2019, 18:50 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ವರ್ತೂರು ಹೋಬಳಿಯ ಕಸವನಹಳ್ಳಿ ಗ್ರಾಮದಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ವರದಿ ಸಲ್ಲಿಸುವಂತೆ ಜಂಟಿ ಸಮಿತಿಗೆ ರಾಷ್ಟ್ರೀಯ ಹಸಿರು ಪೀಠ (ಎನ್‌ಜಿಟಿ) ಆದೇಶ ನೀಡಿದೆ.

‘ಕೆರೆ ಬಫರ್ ವಲಯದಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಿಸಲು ಗೋದ್ರೆಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ಸ್‌ ಡೆವಲಪ್‌ಮೆಂಟ್ ಪ್ರೈ.ಲಿ ಮುಂದಾಗಿದೆ. ಈ ಜಾಗದಲ್ಲಿ ರಾಜಕಾಲುವೆಗಳು ಹಾದು ಹೋಗಿವೆ’ ಎಂದು ಅಪಾರ್ಟ್‌ಮೆಂಟ್ ನಿರ್ಮಾಣ ಪ್ರಶ್ನಿಸಿ ಎಚ್‌.ಪಿ. ರಾಜಣ್ಣ ಎನ್ನುವವರು ಎನ್‌ಜಿಟಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಎನ್‌ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಎ.ಕೆ. ಗೋಯಲ್ ನೇತೃತ್ವದ ಪೀಠ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ಕರ್ನಾಟಕದ ರಾಜ್ಯ ಪರಿಸರದ ಮೇಲಿನ ಪರಿಣಾಮಗಳ ಅಧ್ಯಯನ ಪ್ರಾಧಿಕಾರ (ಎಸ್‌ಇಐಎಎ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT