ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಷಕರು ಹೆಮ್ಮೆ ಪಡುವಂತೆ ಮಾಡಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್‌ ಕಿವಿಮಾತು

Published : 2 ಅಕ್ಟೋಬರ್ 2024, 14:40 IST
Last Updated : 2 ಅಕ್ಟೋಬರ್ 2024, 14:40 IST
ಫಾಲೋ ಮಾಡಿ
Comments

ಬೆಂಗಳೂರು: ‘ಜೀವನದಲ್ಲಿ ದೊಡ್ಡದಾದ ಗುರಿಗಳನ್ನು ಹಾಕಿಕೊಂಡು, ಅದನ್ನು ಸಾಕಾರಗೊಳಿಸಲು ಪ್ರಯತ್ನಿಸಬೇಕು. ಪೋಷಕರು ಹೆಮ್ಮೆಪಡುವಂತಹ ಸಾಧನೆ ಮಾಡಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಕೆ.ಆರ್.ಪುರದಲ್ಲಿರುವ ಕೇಂಬ್ರಿಜ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ ತರಗತಿಗಳಿಗೆ ಚಾಲನೆ ನೀಡಿ, ಮಾತನಾಡಿದರು. ‘ಕೇಂಬ್ರಿಜ್ ತಾಂತ್ರಿಕ ಮಹಾವಿದ್ಯಾಲಯವು ಅತ್ಯುತ್ತಮ ಗುಣಮಟ್ಟದ ಮೂಲಸೌಕರ್ಯಗಳನ್ನು ಹೊಂದಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿಯಾಗಿಲ್ಲ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂಬ್ರಿಜ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಿ.ಕೆ. ಮೋಹನ್‌, ‘ಈ ವಿದ್ಯಾಲಯವು ಜಾಗತಿಕ ಮಟ್ಟದ ಮೂಲಸೌಕರ್ಯಗಳನ್ನು ಹೊಂದಿದ್ದು, ಇಲ್ಲಿಯ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಇಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಬುದ್ದಿಮತ್ತೆ ಹೆಚ್ಚಿಸಿಕೊಳ್ಳಬೇಕು’ ಎಂದರು.

‘ವಿದ್ಯಾರ್ಥಿಗಳು ಪರಿಶ್ರಮದಿಂದ ತಮ್ಮ ಗುರಿ ಮುಟ್ಟಲು ಹೇಗೆ ಪ್ರಯತ್ನಿಸಬೇಕು? ಹೇಗೆ ಜೀವನದಲ್ಲಿ ಮುಂದೆ ಬರಬೇಕು’ ಎನ್ನುವುದರ ಬಗ್ಗೆ ಕತೆಗಾರ ಆನಂದ್ ಮುನ್ಷಿ ಮಾತನಾಡಿದರು.

ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲೆ ಜಿ. ಇಂದುಮತಿ, ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತಿನ್ ಮೋಹನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT