ಬುಧವಾರ, ಸೆಪ್ಟೆಂಬರ್ 29, 2021
20 °C

‘ವಿದ್ಯಾರ್ಥಿಗಳ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. 

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ಮಾತನಾಡಿ, ‘ಪ್ರತಿಭಟಿಸುವ ಹಕ್ಕನ್ನು ಧಮನಿಸುವ ರಾಜ್ಯ ಸರ್ಕಾರದ ನಡೆ ಖಂಡನೀಯ. ವಿದ್ಯಾರ್ಥಿಗಳ ಮೇಲೆ ಏಕಾಏಕಿ ಪೊಲೀಸರು ಲಾಠಿ ಬೀಸಿ, ದೌರ್ಜನ್ಯ ನಡೆಸಿದ್ದಾರೆ. ಪ್ರತಿಭಟನನಿರತ ಹಲವಾರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ’ ಎಂದು ಹೇಳಿದರು. 

‘ಈ ಹಿಂದೆ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಲೋಪದೋಷಗಳ ಕರಡು ಪ್ರತಿಯನ್ನು ನೀಡಲಾಗಿದೆ. ವಿಧಾನಸೌಧ ಮುತ್ತಿಗೆ ನಡೆಸುವ ಬಗ್ಗೆ ಈ ಮೊದಲೇ ಸುದ್ದಿಗೋಷ್ಠಿ ಕರೆದು, ತಿಳಿಸಲಾಗಿತ್ತು. ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು, ಪ್ರತಿಭಟನೆಗೆ ಮುಂದಾದಾಗ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಪೊಲೀಸರು ಯುವತಿಯರನ್ನೂ ಎಳೆದಾಡಿದ್ದಾರೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.