ಶುಕ್ರವಾರ, ನವೆಂಬರ್ 27, 2020
19 °C

ಕೆನರಾ ಬ್ಯಾಂಕ್‌: ಸಂಸ್ಥಾಪಕರ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್‌ನ ‘ಸಂಸ್ಥಾಪಕರ ದಿನಾಚರಣೆ’ ನಗರದ ಜೆ.ಸಿ. ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಯಿತು.

ಬ್ಯಾಂಕಿನ ಸಂಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಮರಿ ಮೊಮ್ಮಗನ ಮಗ ಅಮ್ಮೆಂಬಳ ಸಿದ್ಧಾರ್ಥ ಪೈ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ ಎಲ್.ವಿ. ಪ್ರಭಾಕರ್ ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಮತ್ತು ಸಿಬ್ಬಂದಿ ದೇಶದ ಎಲ್ಲೆಡೆಗಳಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

‘ಬಡವರಿಗೆ ಅತ್ಯುತ್ತಮ ಸೇವೆಗಳನ್ನು ಯೋಗ್ಯ ಬೆಲೆಗೆ ಒದಗಿಸಲು ವ್ಯವಸ್ಥಿತವಾದ ಬ್ಯಾಂಕ್ ಬೇಕು ಎಂದು ಸುಬ್ಬರಾವ್ ಪೈ ಅವರು ಬಯಸಿದ್ದರು. ಅವರ ಕನಸುಗಳು ಸಾಕಾರಗೊಳ್ಳುತ್ತಿವೆ’ ಎಂದು ಪ್ರಭಾಕರ್ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.