ಮಂಗಳವಾರ, ಜನವರಿ 26, 2021
25 °C

ಕೆನರಾ ಉತ್ಸವ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ ಮಲ್ಲೇಶ್ವರದ ಕೆನರಾ ಯೂನಿಯನ್ ಸಭಾಂಗಣದಲ್ಲಿ ಶುಕ್ರವಾರ (ಜ.8) ಬೆಳಿಗ್ಗೆ 10 ಗಂಟೆಯಿಂದ ಕೆನರಾ ಉತ್ಸವ ಆಯೋಜಿಸಿದೆ.

ಕೆನರಾ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಎಂ. ಪರಮಶಿವಮ್ ಅವರು ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಉಪ ಪ್ರಧಾನ ವ್ಯವಸ್ಥಾಪಕ ಎ. ರಾಮಲಿಂಗಂ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಉತ್ಸವದಲ್ಲಿ ಮಹಿಳಾ ಉದ್ಯಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. 50 ಮಹಿಳಾ ಉದ್ಯಮಿಗಳು ಭಾಗವಹಿಸಲಿದ್ದು, ಸಿದ್ಧ ಉಡುಪುಗಳು, ಸೀರೆಗಳು, ಗೃಹಾಲಂಕಾರ ವಸ್ತುಗಳು, ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳು, ಕೃತಕ ಆಭರಣ ಸಾಮಗ್ರಿಗಳು ಇರಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು