ಮಂಗಳವಾರ, ಮೇ 17, 2022
25 °C

ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೈಹಿಕ ಸ್ಥಿತಿ ಎಷ್ಟರ ಮಟ್ಟಿಗೆ ಸದೃಢವಾಗಿದೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ’ ಎಂದು ಕ್ಯಾನ್ಸರ್ ತಜ್ಞರಾದ ಡಾ. ನಂದಾ ರಜನೀಶ್ ಹೇಳಿದರು.

ಸ್ಪಾಕ್‌ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಆರೋಗ್ಯ ಸ್ಥಿತಿ ಉತ್ತಮವಾಗಿರುವುದು ಎಂದರೆ ಯಾವುದೇ ರೋಗವೂ ಇಲ್ಲವೆಂದು ಭಾವಿಸಬೇಕಿಲ್ಲ. ವಯಸ್ಸಾದಂತೆ ದೈಹಿಕ ಆರೋಗ್ಯ ಆಗಾಗ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ’ ಎಂದರು.

‘ನಮ್ಮ ದೇಹದಲ್ಲಿ ರೋಗಗಳ ವಿರುದ್ಧ ಎಷ್ಟರ ಮಟ್ಟಿಗೆ ರೋಗ ನಿರೋಧಕ ವ್ಯವಸ್ಥೆ ಇದೆ ಹಾಗೂ ಅದನ್ನು ನಾವು ಎಷ್ಟರ ಮಟ್ಟಿಗೆ ನಿರ್ವಹಿಸಿದ್ದೇವೆ ಎನ್ನುವುದರ ಆಧಾರದ ಮೇಲೆ ಆರೋಗ್ಯ ನಿರ್ಧರಿತವಾಗುತ್ತದೆ’ ಎಂದು ಅವರು ಹೇಳಿದರು.

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಮೊಬೈಲ್ ಆ್ಯಪ್ ಮತ್ತು ಡಾ.ನಂದಾ ರಜನೀಶ್ ರಚಿಸಿರುವ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು