ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್ ಕಾಯಿಲೆ ಜಾಗೃತಿ ಓಟ

Last Updated 29 ಸೆಪ್ಟೆಂಬರ್ 2019, 19:17 IST
ಅಕ್ಷರ ಗಾತ್ರ

ಯಲಹಂಕ: ಕೆನಡಿಯನ್ ಅಂತರರಾಷ್ಟ್ರೀಯ ಶಾಲೆಯು ಸೈಟ್ಕೇರ್ ಆಸ್ಪತ್ರೆಯ ಸಹಯೋಗದೊಂದಿಗೆ ಕ್ಯಾನ್ಸರ್ ಕಾಯಿಲೆ ಮತ್ತು ಸಂಶೋಧನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ‘ಟೆರ್ರಿ ಫಾಕ್ಸ್’ ಓಟ ಆಯೋಜಿಸಿತ್ತು.

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಿದ್ದ 5ಕೆ ಓಟದಲ್ಲಿ ಕಾಯಿಲೆಯಿಂದ ಬದುಕುಳಿದವರು, ವೈದ್ಯರು ಹಾಗೂ ವಿದ್ಯಾರ್ಥಿಗಳೂ ಸೇರಿದಂತೆ ಎಲ್ಲ ವಯೋಮಾನದ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸಂಶೋಧನೆಗೆ ಬೆಂಬಲ ನೀಡುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸೈಟ್ಕೇರ್ ಸಮೂಹ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ರಾಮು, ‘ಭಾರತದಲ್ಲಿ ಕ್ಯಾನ್ಸರ್ ಸಂಶೋಧನೆಯನ್ನು ಬೆಂಬಲಿಸಲು ಮತ್ತು ಮುನ್ನಡೆಸಲು ಆಸ್ಪತ್ರೆಯು ಸದಾ ಸಿದ್ಧವಿದೆ. ಯಾವುದೇ ಗಡಿ, ಲಿಂಗ, ವಯಸ್ಸು ಮತ್ತು ಆರ್ಥಿಕ ಸ್ಥಿತಿಗತಿಗಳ ತಾರತಮ್ಯವಿಲ್ಲದ ಈ ಕಾಯಿಲೆಗೆ ಸರಿಯಾದ ಸಮಯದಲ್ಲಿ ಸೂಕ್ತಚಿಕಿತ್ಸೆ ಪಡೆಯುವ ಮೂಲಕ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ’ ಎಂದರು.

ಕೆನಡಿಯನ್ ಅಂತರರಾಷ್ಟ್ರೀಯ ಶಾಲೆಯ ವ್ಯವಸ್ಥಾಪಕ ನಿರ್ದೇಶಕಿ ಶ್ವೇತಾಶಾಸ್ತ್ರಿ ಮಾತನಾಡಿ, ‘ಇಂದು ಟೆರ್ರಿ ಪರಂಪರೆಯನ್ನು ಸ್ಮರಿಸುವ ಮತ್ತು ಕ್ಯಾನ್ಸರ್‌ಗೆ ಪರಿಹಾರ ಕಂಡುಕೊಳ್ಳುವ ಅವರ ಕನಸನ್ನು ಜೀವಂತವಾಗಿಡಲು ಪ್ರಯತ್ನಿಸುವ ದಿನ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT