ಮಂಗಳವಾರ, ಜನವರಿ 21, 2020
22 °C

ಪಂಕ್ಚರ್‌ ಪರಿಶೀಲಿಸುತ್ತಿದ್ದಾಗ ಕಾರು ಗುದ್ದಿ ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ತಮ್ಮ ಕಾರಿನ ಚಕ್ರವನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲೇ ಇನ್ನೊಂದು ಕಾರು ಬಂದು ಗುದ್ದಿದ್ದರಿಂದ ಆನಂದ್ (24) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಮಂಗಳವಾರ ಈ ಅವಘಡ ಸಂಭವಿಸಿದೆ.

‘ನಸುಕಿನ 4ರ ಸುಮಾರಿಗೆ ಆನಂದ್‌ ಅವರು ಕಾರು ತೆಗೆದುಕೊಂಡು ದೇವನಹಳ್ಳಿಯತ್ತ ಹೊರಟಿದ್ದರು. ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಕಾರು ಪಂಕ್ಚರ್ ಆಗಿತ್ತು. ಕಾರು ನಿಲ್ಲಿಸಿ ಕೆಳಗೆ ಇಳಿದಿದ್ದ ಅವರು ಚಕ್ರಗಳ ಪರಿಶೀಲನೆ ನಡೆಸುತ್ತಿದ್ದರು. ಅದೇ ಸಂದರ್ಭದಲ್ಲೇ ಬೆಂಗಳೂರಿನಿಂದ ದೇವನಹಳ್ಳಿ ಕಡೆಗೆ ಹೊರಟಿದ್ದ ಕಾರು ಆನಂದ್ ಅವರಿಗೆ ಗುದ್ದಿತ್ತು. ಅಪಘಾತ ನಡೆಸಿದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

‘ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾರಿಹೋಕರು ನೀಡಿದ್ದ ಮಾಹಿತಿಯಂತೆ ಸ್ಥಳಕ್ಕೆ ಹೋಗಿದ್ದ ಸಿಬ್ಬಂದಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಅವಿವಾಹಿತರಾಗಿದ್ದ ತುರವೇಕೆರೆಯ ಆನಂದ್‌ ವೈಟ್‌ಫೀಲ್ಡ್‌ನಲ್ಲಿ ನೆಲೆಸಿದ್ದರು. ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು