ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕಾರುಗಳ ನಡುವೆ ಡಿಕ್ಕಿ: ಕ್ಯಾಬ್ ಚಾಲಕನ ಅಸಭ್ಯ ವರ್ತನೆ, ಪ್ರಕರಣ

Published 10 ಫೆಬ್ರುವರಿ 2024, 16:28 IST
Last Updated 10 ಫೆಬ್ರುವರಿ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಮೇಲೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇದೇ ವಿಚಾರವಾಗಿ ನಡೆದ ಜಗಳದಲ್ಲಿ ಚಾಲಕರೊಬ್ಬರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ದೂರು ಸಲ್ಲಿಕೆಯಾಗಿದೆ.

ಚಾಲಕನ ಅಸಭ್ಯ ವರ್ತನೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿರುವ ಕುಟುಂಬವೊಂದರ ಸದಸ್ಯರು, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ ಅವರನ್ನು ಒತ್ತಾಯಿಸಿದ್ದಾರೆ. ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯಕ್ಕೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ವಿವರ: ‘ಕುಟುಂಬದ ಸದಸ್ಯರು ಕಾರಿನಲ್ಲಿ ಹೆಬ್ಬಾಳ ಮೇಲ್ಸೇತುವೆ ಮೂಲಕ ಹೊರಟಿದ್ದರು. ಕ್ಯಾಬ್ ಚಾಲಕ ಸಹ ಇದೇ ಮಾರ್ಗದಲ್ಲಿ ಹೊರಟಿದ್ದರು. ಎರಡೂ ಕಾರುಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಕಾರಿನಿಂದ ಇಳಿದಿದ್ದ ಕ್ಯಾಬ್ ಚಾಲಕ, ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಚಾಲಕನ ವರ್ತನೆಗೆ ಹೆದರಿ ಕುಟುಂಬದ ಸದಸ್ಯರು ಕಾರಿನ ಬಾಗಿಲು ಸಹ ತೆರೆದಿರಲಿಲ್ಲ. ಜನರು ಸೇರುತ್ತಿದ್ದಂತೆ ಚಾಲಕ ಸ್ಥಳದಿಂದ ಹೊರಟು ಹೋಗಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT