ಶನಿವಾರ, ಏಪ್ರಿಲ್ 4, 2020
19 °C

ಅಪಘಾತ; ಪ್ರಭಾವಿಗಳ ಮಕ್ಕಳ ಗಲಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಕಾರಣಿಯೊಬ್ಬರ ಪುತ್ರ ಸೇರಿ ಪ್ರಭಾವಿಗಳ ಮಕ್ಕಳಿದ್ದ ಕಾರು, ಎದುರಿಗೆ ಇನ್ನೊಂದು ಕಾರಿಗೆ ಗುದ್ದಿ ಅಪಘಾತವನ್ನುಂಟು ಮಾಡಿದ ಘಟನೆ ಚಾಲುಕ್ಯ ವೃತ್ತದಲ್ಲಿ ಮಂಗಳವಾರ ಸಂಭವಿಸಿದೆ.

ಇದರಿಂದ ಎರಡೂ ಗುಂಪಿನ ನಡುವೆ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ಸ್ಥಳಕ್ಕೆ ಬಂದ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು ಎಂದು ಪ್ರತ್ಯಕ್ಷದರ್ಶಿ ಒಬ್ಬರು ಹೇಳಿದರು.

ಗಲಾಟೆ ಬಳಿಕ ರಾಜಕಾರಣಿ ಪುತ್ರ, ಆತನ ಸ್ನೇಹಿತರನ್ನು ಪೊಲೀಸರು ಸ್ಥಳದಿಂದ ಕಳುಹಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ತಡರಾತ್ರಿಯವರೆಗೆ ಯಾವುದೇ ದೂರು ದಾಖಲಾಗಿಲ್ಲ.

‘ಘಟನೆಯಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ರಾಜಕಾರಣಿ ಪುತ್ರನಿದ್ದ ಕಾರಿನ ಚಾಲಕನಿಗೆ ತೀವ್ರ ಗಾಯವಾಗಿದೆ ಎಂದು ತಿಳಿದುಬಂದಿದೆ.

‘ಎರಡು ಕಾರಿನವರು ಪರಸ್ಪರ ಪರಸ್ಪರ ಹೊಡೆದಾಡಿಕೊಂಡರು. ಅಷ್ಟರಲ್ಲೇ ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದರು’ ಎಂದು ಪ್ರತ್ಯಕ್ಷದರ್ಶಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು