ಗುರುವಾರ , ಮೇ 19, 2022
21 °C

ಕಾರಿನ ಗಾಜು ಒಡೆದು ₹ 6.90 ಲಕ್ಷ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನ ಗಾಜು ಒಡೆದು ಡ್ಯಾಷ್‌ ಬೋರ್ಡ್‌ನಲ್ಲಿದ್ದ ₹ 6.90 ಲಕ್ಷವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಲಗ್ಗೆರೆಯ ಚೌಡೇಶ್ವರಿನಗರದಲ್ಲಿ ಏಪ್ರಿಲ್ 8ರಂದು ನಡೆದಿರುವ ಘಟನೆ ಸಂಬಂಧ ಕಾರಿನ ಮಾಲೀಕ ಕುಮಾರ್ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನಾಗಶೆಟ್ಟಿಹಳ್ಳಿ ನಿವಾಸಿ ಕುಮಾರ್, ಎಸ್‌ಬಿಐ ಶಾಖೆಯಲ್ಲಿ ಹಣ ಡ್ರಾ ಮಾಡಿಕೊಂಡಿದ್ದರು. ನಂತರ, ಸ್ನೇಹಿತನನ್ನು ಭೇಟಿಯಾಗಲು ಚೌಡೇಶ್ವರಿನಗರದ ಅಪೋಲೊ ಶಾಲೆ ಬಳಿ ಹೋಗಿದ್ದರು. ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಮನೆಯೊಳಗೆ ತೆರಳಿದ್ದರು. ಕೆಲ ಹೊತ್ತಿನ ನಂತರ ವಾಪಸು ಬಂದು ನೋಡಿದಾಗ, ಕಾರಿನ ಗಾಜು ಒಡೆದು ಹಣ ಕದ್ದುಕೊಂಡು ಹೋಗಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು