ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗೆ ಕಾರು ಡಿಕ್ಕಿ: ಟೆಕಿ ಸಾವು

Last Updated 15 ಏಪ್ರಿಲ್ 2023, 4:30 IST
ಅಕ್ಷರ ಗಾತ್ರ

ಬೆಂಗಳೂರು: ಕಸವನಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸಾಫ್ಟ್‌ವೇರ್ ಎಂಜಿನಿಯರ್ ಅಮಿತ್ ಭಾರ್ಗವ್ (46) ಮೃತಪಟ್ಟಿದ್ದಾರೆ.

‘ಹರಿಯಾಣದ ಅಮಿತ್ ಭಾರ್ಗವ್, ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಸವನಹಳ್ಳಿ ಮುಖ್ಯರಸ್ತೆ ಬಳಿ ವಾಸವಿದ್ದರು. ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ’ ಎಂದು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಅಮಿತ್ ಅವರು ಗುರುವಾರ ರಾತ್ರಿ 12.30 ಗಂಟೆ ಸುಮಾರಿಗೆ ಕಸವನಹಳ್ಳಿ ಮುಖ್ಯರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಇದೇ ಮಾರ್ಗದಲ್ಲಿ ಹೊರಟಿದ್ದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ರಸ್ತೆಗೆ ಬಿದ್ದಿದ್ದ ಅಮಿತ್, ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ’ ಎಂದು ಅವರು ಹೇಳಿದರು.

‘ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಅತೀ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT