ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ವಾನದ ಮೇಲೆ ಕಾರು ಹರಿಸಿ ಚಾಲಕ ಪರಾರಿ

Last Updated 6 ಫೆಬ್ರುವರಿ 2022, 20:24 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕಾಕ್ಸ್‌ಟೌನ್‌ ಬಳಿಯ ರಸ್ತೆಯಲ್ಲಿ ಮಲಗಿದ್ದ ಶ್ವಾನವೊಂದರ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿದ್ದು, ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ರಸ್ತೆಯ ಪಕ್ಕದಲ್ಲಿ ಶ್ವಾನ ಮಲಗಿತ್ತು. ಅದೇ ರಸ್ತೆಯಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದ ಚಾಲಕ, ಶ್ವಾನದ ಮೇಲೆ ಹರಿಸಿದ್ದ. ಶ್ವಾನ ನರಳಾಡುತ್ತಿತ್ತು. ನಂತರ, ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಈದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.ಮನೆಯೊಂದರ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೊವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ‘ಶ್ವಾನದ ಮೇಲೆ ಕಾರುಹರಿಸಿದವನನ್ನ ಹಿಡಿದು, ಕಾನೂನು ಕ್ರಮ ಕೈಗೊಳ್ಳಿ’ ಎಂದೂ ಆಗ್ರಹಿಸಿದ್ದಾರೆ.

ಜಯನಗರ ಒಂದನೇ ಹಂತದಲ್ಲಿ ಜ. 29ರಂದು ಕಾರುಹರಿಸಿ ಶ್ವಾನವನ್ನು ಸಾಯಿಸಲಾಗಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ
ಪೊಲೀಸರು, ಉದ್ಯಮಿ ಆದಿಕೇಶವಲು ಮೊಮ್ಮಗ ಆದಿಯನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT