ಮಂಗಳವಾರ, ಮಾರ್ಚ್ 31, 2020
19 °C

‘ಡ್ರಗ್ಸ್’ ಮತ್ತೇರಿಸಿಕೊಂಡಿದ್ದ ಚಾಲಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಚ್‌ಬಿಆರ್ ಲೇಔಟ್‌ನ ನಡುರಸ್ತೆಯಲ್ಲೇ ಕಾರಿನಲ್ಲಿ ಕುಳಿತು ಡ್ರಗ್ಸ್ ಮತ್ತೇರಿಸಿಕೊಂಡಿದ್ದ ಆರೋಪದಡಿ ರೋಷನ್ ಜಮೀರ್ (36) ಎಂಬಾತನನ್ನು ಕೆ.ಜೆ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

‘ಯಾಸೀನ್ ನಗರದ ನಿವಾಸಿಯಾದ ರೋಷನ್, ಎಚ್‌ಬಿಆರ್ ಲೇಔಟ್‌ನ 2ನೇ ಹಂತದ 8ನೇ ಮುಖ್ಯರಸ್ತೆಯಲ್ಲಿ ಕಾರು (ಕೆಎ 03 ಎಡಿ 1997) ನಿಲ್ಲಿಸಿಕೊಂಡು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ. ಅದನ್ನು ಸ್ಥಳೀಯ ನಿವಾಸಿಯೊಬ್ಬರು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದು ಟ್ವಿಟರ್ ಖಾತೆಯಲ್ಲಿ ಅಪ್‌ಲೋಡ್‌ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

‘ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಾಹನ ನೋಂದಣಿ ಸಂಖ್ಯೆ ಸುಳಿವು ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಆತ ಡ್ರಗ್ಸ್ ತೆಗೆದುಕೊಂಡಿದ್ದು ಖಾತ್ರಿ ಆಯಿತು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು