ಬೆಂಗಳೂರು: ವ್ಯಕ್ತಿಯೊಬ್ಬರಿಂದ ₹9 ಲಕ್ಷಕ್ಕೆ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಖರೀದಿಸುವುದಾಗಿ ಒಪ್ಪಂದ ಮಾಡಿಕೊಂಡು ₹25 ಸಾವಿರ ಮುಂಗಡ ಪಾವತಿಸಿ ಕಾರು ಪಡೆದು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ಪ್ರಕರಣವೊಂದರಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಯುವಕನಿಗೆ ಹೈಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

ಈ ಸಂಬಂಧ ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿ ಆದಿತ್ಯ ದೇವಾಡಿಗ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ಜಿ ಉಮಾ ಅವರು ವಿಚಾರಣೆ ನಡೆಸಿದರು.

‘ಅರ್ಜಿದಾರರು ಹದಿನೈದು ದಿನಗಳ ಒಳಗಾಗಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ₹2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯಾಧಾರ ತಿರುಚಲು ಯತ್ನಿಸಬಾರದು. ಅಗತ್ಯವಿದ್ದಾಗ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಬೇಕು. ಇದೇ ಮಾದರಿಯ ಅಪರಾಧದಲ್ಲಿ ಭಾಗಿಯಾಗಬಾರದು’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.