ಬೆಂಗಳೂರು: ‘2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.

‘ನನ್ನ ವಿರುದ್ಧ ಚಿಕ್ಕಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ–1860ರ ಕಲಂ 188 ಮತ್ತು 341ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇದೇ 2ರಂದು ಮಾನ್ಯ ಮಾಡಿದೆ.

‘ಅರ್ಜಿದಾರರ ವಿರುದ್ಧ ವೈಯಕ್ತಿಕ ಹಾಗೂ ನಿರ್ದಿಷ್ಟ ಆರೋಪಗಳಿಲ್ಲ. ಹೀಗಾಗಿ ಅಧೀನ ನ್ಯಾಯಾಲಯ ಅವರ ವಿರುದ್ಧದ ಆರೋಪಗಳನ್ನು ಸಂಜ್ಞೇಯ ಅಪರಾಧ ಎಂದು ವಿಚಾರಣೆಗೆ ಪರಿಗಣಿಸಿರುವುದು ಕಾನೂನು ಬಾಹಿರ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ ಚುನಾ ವಣಾ ಅಧಿಕಾರಿಗಳು ದಾಖಲಿಸಿದ್ದ ದೂರು ಗಳನ್ನು ರದ್ದುಗೊಳಿಸಿದೆ.

ಅರ್ಜಿದಾರರ ಪರ ವಕೀಲ ಡಿ.ಎಲ್.ಜಗದೀಶ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.