ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಬೈಕ್‌ ವ್ಹೀಲಿಂಗ್: 8 ಯುವಕರ ವಿರುದ್ಧ ಪ್ರಕರಣ

Published 24 ಫೆಬ್ರುವರಿ 2024, 14:41 IST
Last Updated 24 ಫೆಬ್ರುವರಿ 2024, 14:41 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಬೈಕ್ ವ್ಹೀಲಿಂಗ್ ನಿಯಂತ್ರಿಸಲು ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, 8 ಯುವಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಕಾಮಾಕ್ಷಿಪಾಳ್ಯ, ವಿಜಯನಗರ ಹಾಗೂ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ವ್ಹೀಲಿಂಗ್ ಮಾಡುತ್ತಿದ್ದ ಎಂಟು ಯುವಕರನ್ನು ವಶಕ್ಕೆ ಪಡೆದು, ಅವರ 7 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಾರ್ವಜನಿಕರ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ವರ್ತನೆಯಿಂದ ಸಾರ್ವಜನಿಕರು ಭಯದಲ್ಲಿದ್ದರು. ವ್ಹೀಲಿಂಗ್ ಬಗ್ಗೆ ಕೆಲವರು ದೂರು ಸಹ ನೀಡಿದ್ದರು. ಹೀಗಾಗಿ, ಈ ಕಾರ್ಯಾಚರಣೆ ನಡೆಸಲಾಯಿತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT