ಶುಕ್ರವಾರ, ಫೆಬ್ರವರಿ 21, 2020
27 °C
ಮಕ್ಕಳ ಹಕ್ಕು ಆಯೋಗಕ್ಕೆ ವರದಿ; ಮುಖ್ಯಶಿಕ್ಷಕಿ–ಪಾಲಕಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ದೇಶದ್ರೋಹ ಪ್ರಕರಣ ಹೈಕೋರ್ಟ್‌ಗೆ ಮೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ/ಬೀದರ್‌: ಬೀದರ್‌ನ ಶಾಹೀನ್‌ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಮಕ್ಕಳು ವಿವಾದಾತ್ಮಕ ನಾಟಕ ಪ್ರದರ್ಶಿಸಿದ್ದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ‘ದೇಶದ್ರೋಹ ಪ್ರಕರಣ’ ರದ್ದುಪಡಿಸುವಂತೆ ಶಾಲೆ ಆಡಳಿತ ಮಂಡಳಿಯವರು ಹೈಕೋರ್ಟ್‌ನ ಕಲಬುರ್ಗಿ ಪೀಠದ ಮೊರೆ ಹೋಗಿದ್ದಾರೆ.

‘ಐಪಿಸಿ 124(ಎ), 153 (ಎ), 504, 505 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇಶದ್ರೋಹವೆಸಗುವ ಘಟನೆ ಅಲ್ಲಿ ನಡೆದಿಲ್ಲ. ಹೀಗಾಗಿ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಶಾಹೀನ್‌ ಶಿಕ್ಷಣ ಸಂಸ್ಥೆ ಪರ ವಕೀಲರು ಫೆ.7ರಂದು ಹೈಕೋರ್ಟ್‌ನ ಕಲಬುರ್ಗಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ಅದೇ ದಿನ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಇದರ ಬಗ್ಗೆ ವಿವರ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಮುಂದೂಡಿತು.

ಶಾಹೀನ್‌ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಮಕ್ಕಳಿಂದ ನಾಟಕ ಮಾಡಿಸಿ, ಚಪ್ಪಲಿ ತೋರಿಸಿ ಪ್ರಧಾನಿಯನ್ನು ಅವಹೇಳನ ಮಾಡಲಾಗಿದೆ ಎಂದು ಬಾಲಕಿಯ ತಾಯಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. 

ಇಂದು ವಿಚಾರಣೆ: ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಫೆ.11ರಂದು ಬೀದರ್‌ನ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯದಲ್ಲಿ ನಡೆಯಲಿದೆ.

‘ತನಿಖೆ ಮುಂದುವರಿದಿದೆ. ಮಕ್ಕಳ ವಿಚಾರಣೆ ಮಾಡಿದ್ದಕ್ಕೆ ರಾಜ್ಯ ಮಕ್ಕಳ ಹಕ್ಕು ಆಯೋಗ ವರದಿ ಕೇಳಿತ್ತು. ಆಯೋಗದ ಸದಸ್ಯೆ ಜಯಶ್ರೀ ಅವರಿಗೆ ವರದಿ ಕಳುಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್‌ ಅವರು ತಿಳಿಸಿದ್ದಾರೆ.

ಅವಧಿ ವಿಸ್ತರಣೆ: ಶಾಲೆ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ಬಾಲಕಿಯ ತಾಯಿ ಅಂಜುಮನ್ನಿಸಾ ಅವರನ್ನು ಸೋಮವಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಬಂಧನದ ಅವಧಿಯನ್ನು ಫೆ.24ರ ವರೆಗೆ ವಿಸ್ತರಿಸಿದೆ.

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಶಾಹೀನ್‌ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ಬಾಲಕಿಯ ತಾಯಿ ಅಂಜುಮನ್ನಿಸಾ ಅವರನ್ನು ಸೋಮವಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಬಂಧನದ ಅವಧಿಯನ್ನು ಫೆ.24ರ ವರೆಗೆ ವಿಸ್ತರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು