ಸೋಮವಾರ, ಅಕ್ಟೋಬರ್ 25, 2021
25 °C
ಒಂದು ವಾರದಲ್ಲಿ 291 ಮಂದಿಗೆ ಡೆಂಗಿ ಜ್ವರ

ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಮತ್ತಷ್ಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರಕ್ಕೆ ಒಳಪಡುವವರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ
291 ಡೆಂಗಿ ಪ್ರಕರಣಗಳು ದೃಢಪಟ್ಟಿವೆ.

ಈ ವರ್ಷ ಮೊದಲ ಆರು ತಿಂಗಳ ಅವಧಿಯಲ್ಲಿ ಡೆಂಗಿ ನಿಯಂತ್ರಣದಲ್ಲಿತ್ತು. ಮುಂಗಾರು ಮಳೆ ಚುರುಕುಗೊಂಡ ಬಳಿಕ ಈ ಜ್ವರಕ್ಕೆ ಒಳಪಡುವವರ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,386ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷ ರಾಜ್ಯದಲ್ಲಿ ಯಾವುದೇ ಡೆಂಗಿ ಮರಣ ಪ್ರಕರಣ ವರದಿಯಾಗಿಲ್ಲ.

ಈ ವರ್ಷ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, 575 ಮಂದಿ ಡೆಂಗಿ ಜ್ವರ ಎದುರಿಸಿದ್ದಾರೆ.

27 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ: ರಾಜ್ಯದಲ್ಲಿ ಈವರೆಗೆ 1,117 ಚಿಕೂನ್‌ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ಉತ್ತರ ಕನ್ನಡ, ರಾಯಚೂರು ಹಾಗೂ ದಕ್ಷಿಣ ಕನ್ನಡ ಬಿಟ್ಟು ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರಕರಣಗಳು ಖಚಿತಪಟ್ಟಿವೆ. ವಾರದಲ್ಲಿ 110 ಮಂದಿ ಈ ಜ್ವರಕ್ಕೆ ಒಳಗಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು