ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹7.11 ಕೋಟಿ ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹5.76 ಕೋಟಿ ವಶಕ್ಕೆ ಪಡೆಯಲಾಗಿದೆ.

ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್ಸ್ಟೆಬಲ್ ಮತ್ತು ಸಿಎಂಎಸ್ ಕಂಪನಿ ಮಾಜಿ ನೌಕರ ಬಂಧಿತ ಆರೋಪಿಗಳು.

54 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಲಾಗಿದೆ. 200 ಮಂದಿ ಪೊಲೀಸರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

ಆರೋಪಿಗಳು ಮೂರು ತಿಂಗಳಿಂದ ಸಂಚು ನಡೆಸಿದ್ದರು. 15 ದಿನಗಳಿಂದ ಆ ಪ್ರದೇಶದಲ್ಲಿ ಓಡಾಟ ನಡೆಸಿದ್ದರು ಎಂದು ತಿಳಿದು ಬಂದಿದೆ.

ತನಿಖಾ ತಂಡ ಹಾಗೂ ಸಿಬ್ಬಂದಿಗೆ ₹5 ಲಕ್ಷ ನಗದು ಬಹುಮಾನ

ತನಿಖಾ ತಂಡ ಹಾಗೂ ಸಿಬ್ಬಂದಿಗೆ ₹5 ಲಕ್ಷ ನಗದು ಬಹುಮಾನ ನೀಡುವುದಾಗಿ ನಗರ ಪೊಲೀಸ್ ಕಮಿಷವರ್ ಸೀಮಾಂತ್ ಕುಮಾರ್ ಸಿಂಗ್ ಘೋಷಿಸಿದ್ದಾರೆ.

ಪ್ರಕರಣದಲ್ಲಿ ಇನ್ನೂ ಐವರು ಭಾಗಿಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. 5 ರಾಜ್ಯದಲ್ಲಿ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.
.₹ 7.11 ಕೋಟಿ ದರೋಡೆ ಪ್ರಕರಣದ ಸೂತ್ರಧಾರ ಕಾನ್ಸ್ಟೆಬಲ್?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.