ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ತಕ್ಷಣ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಮತ್ತು ಉಪಾಧ್ಯಕ್ಷ ಎಂ.ರಾಮಯ್ಯ ಅವರಿದ್ದ ನಿಯೋಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು ಅವರಿಗೆ ಬುಧವಾರ ಮನವಿ ಸಲ್ಲಿಸಿತು.

‘ಸರ್ಕಾರದ ಯೋಜನೆಗಳು ಅವಕಾಶ ವಂಚಿತ ಸಮುದಾಯಗಳಿಗೆ ತಲುಪಬೇಕಾದರೆ, ವರದಿ ಬಿಡುಗಡೆ ಮಾಡಬೇಕು. ಆಯೋಗದಿಂದ ವರದಿ ಪಡೆಯಲು ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ. ಉದ್ದೇಶಪೂರ್ವಕವಾಗಿ ಹೀಗೆ ವರ್ತಿಸುತ್ತಿದೆ. ಆದ್ದರಿಂದ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ’ ಎಂದು ರಾಮಚಂದ್ರಪ್ಪ ತಿಳಿಸಿದರು.

‘ಆಯೋಗ ನಮ್ಮ ಮನವಿಯನ್ನು ಪುರಸ್ಕರಿಸಿ, ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದುಕೊಂಡಿದ್ದೇವೆ. ವಾರದವರೆಗೂ ಕಾಯುತ್ತೇವೆ. ಸಲ್ಲಿಸದಿದ್ದರೆ, ನಮ್ಮ ಒಕ್ಕೂಟದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.