ಬೆಂಗಳೂರು: ಜಾತಿ ನಿಂದನೆ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಓಡಾಟ ನಡೆಸುತ್ತಿದ್ದ ಆರೋಪದಡಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ವಾರಂಟ್ ಜಾರಿ ಆಗಿದ್ದರೂ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ನ್ಯಾಯಾಲಯ ಜಾಮೀನುರಹಿತ ಬಂಧನದ ವಾರಂಟ್ ಹೊರಡಿಸಿತ್ತು ಎಂದು ಮೂಲಗಳು ತಿಳಿಸಿವೆ.
ಗೋವಾದಲ್ಲಿ ಜಗದೀಶ್ ಇದ್ದರು. ಅಲ್ಲಿ ಅವರನ್ನು ವಶಕ್ಕೆ ಪಡೆದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.