ಬೆಂಗಳೂರು: ‘ಜಾತಿಸಮೀಕ್ಷೆಯಲ್ಲಿ ನೇಕಾರರ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ನಿಖರ ಮಾಹಿತಿಗಾಗಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದಿಂದಲೇ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ಒಕ್ಕೂಟದ ಅಧ್ಯಕ್ಷ ಬಿ.ಎಸ್.ಸೋಮಶೇಖರ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ನಾವು ಜಾತಿಗಣತಿಯನ್ನು ಸ್ವಾಗತಿಸುತ್ತೇವೆ. ಆದರೆ, ಗಣತಿ ಸಮರ್ಪಕವಾಗಿ ನಡೆದಿಲ್ಲ. ನಮ್ಮ ಪ್ರಕಾರ ಸಮುದಾಯದ ಜನಸಂಖ್ಯೆ 40 ಲಕ್ಷದಿಂದ 45 ಲಕ್ಷ ಇದೆ. ಆದರೆ, ಆಯೋಗದ ವರದಿ ಕೇವಲ 9.30 ಲಕ್ಷ ಇದೆ’ ಎಂದು ಹೇಳಿದರು.

‘ನೇಕಾರರ ಸಮುದಾಯದ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಸೇರಿ ಐದಾರು ಸಭೆಗಳನ್ನು ನಡೆಸಲಾಗಿದೆ. ಮರುಸಮೀಕ್ಷೆಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ’ ಎಂದು ಹೇಳಿದರು.

ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಎಂಬ ಆ್ಯಪ್ ತಯಾರಿಸಲಾಗಿದೆ. ಅದರಲ್ಲಿ ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಮಾಹಿತಿ ಭರ್ತಿ ಮಾಡಬಹುದು. ಅಲ್ಲದೇ 224 ವಿಧಾನಸಭಾ ಕ್ಷೇತ್ರಗಳಲ್ಲೂ ಒಕ್ಕೂಟದಿಂದ ನೇಮಕಗೊಂಡವರು ನೇಕಾರರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆಗಸ್ಟ್ ಒಳಗೆ ಸಮೀಕ್ಷೆ ಮುಗಿಯಲಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ರಘು ಶೆಟ್ಟಿಗಾರ್. ಶಿವಪ್ಪ ಶೆಟ್ಟಿ, ನವೀನ್, ಜಗದೀಶ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.