ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ’ಜಾತಿ ಪ್ರಮಾಣಪತ್ರದಿಂದ ಬಡ ಬ್ರಾಹ್ಮಣರಿಗೆ ಅನುಕೂಲ‘

Last Updated 22 ಜುಲೈ 2020, 8:59 IST
ಅಕ್ಷರ ಗಾತ್ರ

ಬೆಂಗಳೂರು: ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಭಿನಂದನೆ ತಿಳಿಸಿದೆ.

ಮಹಾಸಭಾದ ಉಪಾಧ್ಯಕ್ಷ ಎಂ.ವಿ.ಶಂಕರ ನಾರಾಯಣ, 'ಉಡುಪಿಯಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಸಮ್ಮೇಳನದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು ಹಾಗೂ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂದು ಸಲಹೆ ನೀಡಿದ್ದರು. ಈ ಸಂಬಂಧ ಆದೇಶ ಹೊರಡಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಈಗ ನುಡಿದಂತೆ ನಡೆದ್ದಾರೆ' ಎಂದಿದ್ದಾರೆ.

'ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಈ ಸೌಲಭ್ಯದಿಂದ ಅನುಕೂಲವಾಗಲಿದೆ‘ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT