ಸಮೀಕ್ಷೆ ಪ್ರಶ್ನಿಸಿ ಹಾವೇರಿ ಜಿಲ್ಲೆಯ ಹಿರೇಕೆರೂರಿನ ಲಿಂಗರಾಜ ಚಪ್ಪರದಳ್ಳಿ ಸಲ್ಲಿಸಿರುವ ಮತ್ತೊಂದು ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ, ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.