ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

15 ದಿನಗಳಲ್ಲಿ ಕಾವೇರಿ 5ನೇ ಹಂತಕ್ಕೆ ಚಾಲನೆ: ಡಿ.ಕೆ.ಸುರೇಶ್

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಿಂದ ಉದ್ಘಾಟನೆ
Published : 18 ಸೆಪ್ಟೆಂಬರ್ 2024, 16:27 IST
Last Updated : 18 ಸೆಪ್ಟೆಂಬರ್ 2024, 16:27 IST
ಫಾಲೋ ಮಾಡಿ
Comments

ಬೆಂಗಳೂರು: ‘ಕಾವೇರಿ ಐದನೇ ಹಂತದ ಯೋಜನೆ 15 ದಿನಗಳಲ್ಲಿ ಉದ್ಘಾಟನೆಯಾಗಲಿದ್ದು, ಈ ಭಾಗದ ಬಹುಕಾಲದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ’ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ ಹೇಳಿದರು.

ಬುಧವಾರ ಬೇಗೂರಿನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಕಾವೇರಿ ನೀರು 5ನೇ ಹಂತದ ಯೋಜನೆಯನ್ನು ಉದ್ಘಾಟಿಸಲಿದ್ದಾರೆ’ ಎಂದರು.

‘ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರ್ಕಾರ ವಾರ್ಷಿಕ ₹56 ಸಾವಿರ ಕೋಟಿ ಹಣವನ್ನು ಜನರಿಗೆ ನೀಡುತ್ತಿದೆ, ನನೆಗುದಿಗೆ ಬಿದ್ದಿದ್ದ ಹಲವು ಮೂಲ ಸೌಕರ್ಯ ಆಧಾರಿತ ಕಾಮಗಾರಿಗಳು ನಡೆಯುತ್ತಿವೆ. ಇಷ್ಟೆಲ್ಲ ಅಭಿವೃದ್ಧಿಕಾರ್ಯಗಳು ನಡೆಯುತ್ತಿದ್ದರೂ ಬಿಜೆಪಿಯವರು ಸುಳ್ಳು ಮಾಹಿತಿ ಹಂಚುವುದರಲ್ಲಿ ಮಗ್ನರಾಗಿದ್ದಾರೆ’ ಎಂದು ಕಿಡಿಕಾರಿದರು.

ಬಿಬಿಎಂಪಿ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ‘ಗೃಹಲಕ್ಷ್ಮಿ ಯೋಜನೆಗೆ ಬೆಂಗಳೂರಿನಲ್ಲಿ ₹9.21 ಲಕ್ಷ ಮಹಿಳೆಯರು ನೋಂದಾಯಿಸಿದ್ದಾರೆ. ಇವರಿಗೆ ಜೂನ್‌ವರೆಗೆ ಹಣ ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ ಸರ್ಕಾರ ಬೆಂಗಳೂರು ನಗರಕ್ಕೆ ₹1,110 ಕೋಟಿ ಖರ್ಚು ಮಾಡಿದೆ. ಅನ್ನಭಾಗ್ಯ ಯೋಜನೆಯಡಿ ₹7,762 ಕೋಟಿ, ಗೃಹಜ್ಯೋತಿಗೆ ₹2580 ಕೋಟಿ ಹಾಗೂ ಯುವನಿಧಿ ಯೋಜನೆಗೆ ಈವರೆಗೆ ₹90 ಕೋಟಿ ‌ಖರ್ಚಾಗಿದೆ’ ಎಂದು ಮಾಹಿತಿ ಒದಗಿಸಿದರು. ಗ್ಯಾರಂಟಿ ಯೋಜನೆಗಳು ತಲುಪದ ಫಲಾನುಭವಿಗಳು 9480683972ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದು ಎಂದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಆಂಜನಪ್ಪ, ಕಾಂಗ್ರೆಸ್‌ನ ಬೆಂಗಳೂರು ಜಿಲ್ಲಾಧ್ಯಕ್ಷ ಓ.ಮಂಜುನಾಥ್, ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್, ಸುಜಯ್ ಕುಮಾರ್, ಟಿ.ವಾಸುದೇವರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT