ಸೋಮವಾರ, ಸೆಪ್ಟೆಂಬರ್ 23, 2019
28 °C

ತಮಿಳುನಾಡಿನಲ್ಲಿ ಇಂದಿನಿಂದ ‘ಕಾವೇರಿ ಕೂಗು’ ಅಭಿಯಾನ

Published:
Updated:
Prajavani

ಬೆಂಗಳೂರು: ಕಾವೇರಿ ನದಿಯ ಪುನಶ್ಚೇತನಕ್ಕಾಗಿ ಈಶ ಫೌಂಡೇಷನ್‌ನ ಸಂಸ್ಥಾಪಕ ಜಗ್ಗಿ ವಾಸುದೇವ್ (ಸದ್ಗುರು) ನೇತೃತ್ವದಲ್ಲಿ ಆರಂಭವಾಗಿರುವ ‘ಕಾವೇರಿ ಕೂಗು’ ಅಭಿಯಾನ ಬುಧವಾರ ತಮಿಳುನಾಡು ತಲುಪಲಿದೆ. 

ಕರ್ನಾಟಕದಲ್ಲಿ ಅಭಿಯಾನ ಯಶಸ್ವಿಯಾಗಿ ಸಂಪನ್ನವಾಗಿದ್ದು, ಬೆಳಿಗ್ಗೆ 8.30ಕ್ಕೆ ಹೊಸೂರು ಮೂಲಕ ತಮಿಳುನಾಡಿಗೆ ತೆರಳಲಿದೆ. ಈ ನಡುವೆ, ಅಧಿಯಮಾನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಹೊಸೂರು) ಸದ್ಗುರು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಜುಲೈ ತಿಂಗಳಲ್ಲಿ ಸದ್ಗುರು ‘ಕಾವೇರಿ ಕೂಗು’ ಅಭಿಯಾನವನ್ನು ಆರಂಭಿಸಿದ್ದು, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಸೇರಿದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ 242 ಕೋಟಿ ಮರಗಳನ್ನು ಬೆಳೆಸುವ ಗುರಿ ಹಾಕಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ ಸಿನಿ ತಾರೆಯರು, ಕ್ರೀಡಾಪಟುಗಳು, ರಾಜಕಾರಣಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕೈ ಜೋಡಿಸಿದ್ದಾರೆ. ಉಭಯ ರಾಜ್ಯ ಸರ್ಕಾರಗಳು ಸಹ ಈ ಕಾರ್ಯಕ್ಕೆ ಬೆಂಬಲ ಸೂಚಿಸಿವೆ. 

Post Comments (+)