ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಕೂಗಿಗೆ ವಿದ್ಯಾರ್ಥಿಗಳ ಧ್ವನಿ

Last Updated 30 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಈಶ ಫೌಂಡೇಷನ್ ಆರಂಭಿಸಿರುವ ‘ಕಾವೇರಿ ಕೂಗು’ ಅಭಿಯಾನಕ್ಕೆ ನಗರದ ವಿದ್ಯಾರ್ಥಿಗಳು ಕೈಜೋಡಿಸಿದ್ದು,ಶುಕ್ರವಾರ ‌4 ಸಾವಿರಕ್ಕೂ ಅಧಿಕ ಮಂದಿ ಜಾಗೃತಿ ಮೂಡಿಸಿದರು.

ನಗರದ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣದ ಬಳಿ ಬೆಳಿಗ್ಗೆ ಸೇರಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ನೀರಿನ ಮಹತ್ವದ ಬಗ್ಗೆ ಮನವರಿಕೆ ಮಾಡಲು ಪ್ರಯತ್ನಿಸಿದರು. ‘ಕಾವೇರಿ ಕೂಗು’ ಎಂಬ ಭಿತ್ತಿಪತ್ರಗಳನ್ನೂ ಪ್ರದರ್ಶಿಸಿದರು.

ಈಶ ಫೌಂಡೇಷನ್‌ನ ಸಂಸ್ಥಾಪಕ ಸದ್ಗುರು ಈ ಅಭಿಯಾನದ ನೇತೃತ್ವ ವಹಿಸಿದ್ದು,ಕಾವೇರಿ ನದಿಯ ಇಕ್ಕೆಲಗಳಲ್ಲಿ 242 ಕೋಟಿ ಮರಗಳನ್ನು ಬೆಳೆಸುವ ಗುರಿಯನ್ನು ಫೌಂಡೇಷನ್ ಹಾಕಿಕೊಂಡಿದೆ.ನದಿಪಾತ್ರದ 83 ಸಾವಿರ ಚ.ಕಿ.ಮೀ. ವ್ಯಾಪ್ತಿಯಲ್ಲಿ ಕಾಡು ಬೆಳೆದರೆ ನದಿಯ ನೀರಿನ ಮಟ್ಟ ಏರಿಕೆಯಾಗುವುದಲ್ಲದೇ ರೈತರ ಆದಾಯವೂ ವೃದ್ಧಿಯಾಗಲಿದೆ ಎನ್ನುವುದು ಅಭಿಯಾನದ ಹಿಂದಿನ ಉದ್ದೇಶ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT