ಬೆಂಗಳೂರು: ‘ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ನಮಗೆ ಅನ್ಯಾಯ ಆಗಿದೆ. ಕನ್ನಡಿಗರು ಒಗ್ಗಟ್ಟಾಗಿ ಹೋರಾಡದಿದ್ದರೆ ನಮಗೆ ನ್ಯಾಯ ಸಿಗುವುದಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕಾವೇರಿ ನದಿ ರಕ್ಷಣಾ ಸಮಿತಿ ಶನಿವಾರ ಹಮ್ಮಿಕೊಂಡಿದ್ದ ‘ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರಸಂಕಿರಣ’ದಲ್ಲಿ ಅವರು ಮಾತನಾಡಿದರು.

‘ಸಂಸತ್ನಲ್ಲಿ ಕಾವೇರಿ ವಿಷಯ ಪ್ರಸ್ತಾಪವಾದಾಗ ತಮಿಳುನಾಡಿನ ಎಲ್ಲಾ ಸಂಸದರು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಾಗಿಬಿಡುತ್ತಾರೆ. ಆದರೆ, ನಮ್ಮಲ್ಲಿ ಏನಾಗುತ್ತಿದೆ? ಎಲ್ಲಕ್ಕೂ ರಾಜಕೀಯ ತರುತ್ತೇವೆ, ಜಾತಿ ತರುತ್ತೇವೆ. ಇದೇ ನಮಗೆ ಮುಳುವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ‘ನೀರಗಂಟಿ’ ಕೆಲಸ ಮಾಡುತ್ತಿದ್ದೇವೆ. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ’ ಎಂದರು.

‘ತಮಿಳುನಾಡಿನ ಡಿಎಂಕೆ ಜತೆ ನಮ್ಮ ಸಂಬಂಧ ರಾಜಕೀಯಕ್ಕೆ ಮಾತ್ರ ಸೀಮಿತ. ಡಿಎಂಕೆ ಜತೆ ಮೇಕೆದಾಟು ವಿಷಯ ಮಾತನಾಡುವುದಕ್ಕೆ ರಾಜಕೀಯ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಇಲ್ಲಿ ನೋಡಿದರೆ ಮೇಕೆದಾಟು ಪಾದಯಾತ್ರೆ ಮಾಡಿ ನಮ್ಮ ನೀರು ನಮ್ಮ ಹಕ್ಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನದಟ್ಟಣೆಯಿಂದ ಮುಂದೆ ಇಡೀ ಕನ್ನಂಬಾಡಿ ಕಟ್ಟೆಯ ನೀರೆಲ್ಲವನ್ನು ಕೊಟ್ಟರೂ ರಾಜಧಾನಿಗೆ ಕುಡಿಯುವ ನೀರು ಸಾಕಾಗದ ಪರಿಸ್ಥಿತಿ ಬರಬಹುದೇನೋ’ ಎಂದು ಆತಂಕ ವ್ಯಕ್ತಪಡಿಸಿದರು.

‘ಕಾವೇರಿ ಬಗ್ಗೆ ಹಿಂದೆ ರಾಜ್ಯದಲ್ಲಿ ನಡೆದಿರುವ ಹೋರಾಟ, ತ್ಯಾಗವನ್ನು ಮರೆಯುತ್ತಿದ್ದೇವೆ. ಚನ್ನಬಸಪ್ಪ, ಎಚ್.ಎನ್. ನಂಜೇಗೌಡ, ದೇವೇಗೌಡರು ನಡೆಸಿದ ಹೋರಾಟಗಳನ್ನು ನಾವು ನೆನಪಿಸಿಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.