ಭಾನುವಾರ, ಜುಲೈ 25, 2021
28 °C

ದಶಕಗಳ ನಂತರ ಕಾವೇರಿ ನೀರು ಸಂಪರ್ಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: 20 ವರ್ಷಗಳಿಂದ ಕಾವೇರಿ ನೀರಿಗಾಗಿ ಕಾಯುತ್ತಿದ್ದ ರಾಯಲ್ ಪಾರ್ಕ್‍ನ ನಿವಾಸಿಗಳಲ್ಲಿ ಶನಿವಾರ ಸಂತಸ ಮನೆ ಮಾಡಿತ್ತು. 

ಆವಲಹಳ್ಳಿ ರಾಯಲ್ ಪಾರ್ಕ್‍ನ ನಿವಾಸಿಗಳಿಗೆ ಕಾವೇರಿ ನೀರಿನ ಮೀಟರ್ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾತನಾಡಿದ ಬಿಬಿಎಂಪಿ ಸದಸ್ಯ ಕೆ. ಸೋಮಶೇಖರ್, ‘ಕಾವೇರಿ ನೀರು ಸರಬರಾಜು ಮಾಡಲು ತಾಂತ್ರಿಕ ತೊಂದರೆ ಎದುರಾಗಿತ್ತು. ಶಾಸಕ ಎಂ.ಕೃಷ್ಣಪ್ಪ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸಮಸ್ಯೆ ಬಗೆಹರಿಸಿದ್ದಾರೆ’ ಎಂದರು. 

‘ರಾಯಲ್‌ ಪಾರ್ಕ್‌ನಲ್ಲಿ 385 ಮನೆಗಳಿವೆ. ಈಗ ಕಾವೇರಿ ನೀರಿನ ಸಂಪರ್ಕ ಸಿಕ್ಕಿದ್ದು, ಕೃಷ್ಣಪ್ಪ ಅವರಿಗೆ ಮತ್ತು ಸರ್ಕಾರಕ್ಕೆ ನಿವಾಸಿಗಳ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.  ಚುಂಚಘಟ್ಟ ಸುಬ್ರಮಣಿ, ನಿವಾಸಿಗಳ ಸಂಘದ ಅಧ್ಯಕ್ಷ ಶ್ರೀಪತಿ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು