ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8ರಂದು ಕಾವೇರಿ ನೀರು ಪೂರೈಕೆ ವ್ಯತ್ಯಯ ಸಾಧ್ಯತೆ

Published 3 ಮೇ 2024, 19:50 IST
Last Updated 3 ಮೇ 2024, 19:50 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ 5ನೇ ಹಂತದ ಯೋಜನೆಯ ಸಂಬಂಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮೇ 8ರಂದು ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ವಿದ್ಯುತ್ ಸಂಬಂಧಿತ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿದೆ.

ಅಂದು ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ ಐದು ಹಂತಗಳ ಜಲರೇಚಕ ಯಂತ್ರಗಾರಗಳನ್ನು ಒಂದು ಗಂಟೆ ಸ್ಥಗಿತಗೊಳಿಸಲಾಗುತ್ತಿದೆ. ಈ ಕಾರಣದಿಂದಾಗಿ ಆ ದಿನ ನೀರು ಪೂರೈಕೆಯಲ್ಲಿ ಶೇ 5ರಷ್ಟು ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT