ಬೆಂಗಳೂರು: ತುರ್ತು ನಿರ್ವಹಣೆ ಸಂಬಂಧ ಕೈಗೊಂಡಿದ್ದ ಕಾಮಗಾರಿಯನ್ನು ನಿಗದಿಗಿಂತ ಮೊದಲೇ ಪೂರ್ಣಗೊಳಿಸಲಾಗಿದೆ. ಹೀಗಾಗಿ ಕಾವೇರಿ ನೀರು ಸರಬರಾಜಿನಲ್ಲಿ ಆಗಿದ್ದ ವ್ಯತ್ಯಯವನ್ನು ಒಂದು ದಿನ ಮೊದಲೇ ಸರಿಪಡಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆಸಿಕೊಂಡು ಹಗಲು–ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆದಾರರಿಗೆ ಸೂಚಿಸಲಾಯಿತು. ಎರಡು ದಿನಗಳಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆಯಿಂದ ನಗರದ ಎಲ್ಲಾ ಭಾಗಗಳಲ್ಲಿ ನೀರು ಸರಬರಾಜು ಪ್ರಕ್ರಿಯೆ ಪುನರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ವಿವಿಧೆಡೆ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಮೂರು ದಿನ ಕುಡಿಯುವ ನೀರಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿಯು ಸಾರ್ವಜನಿಕರಿಗೆ ಮೊದಲೇ ಮಾಹಿತಿ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.