ಬೆಂಗಳೂರು: ಕಾವೇರಿ ನದಿ ರಕ್ಷಣಾ ಸಮಿತಿಯು ಏಪ್ರಿಲ್ 5ರಂದು ಬೆಳಿಗ್ಗೆ 10 ಗಂಟೆಗೆ ಕೆ.ಆರ್. ರಸ್ತೆಯಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ‘ನ್ಯಾಯಯುತ ನೀರಿನ ಹಕ್ಕಿಗಾಗಿ’ ಶೀರ್ಷಿಕೆಯಡಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರಸಂಕಿರಣ ಹಮ್ಮಿಕೊಂಡಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಚ್.ಕೆ. ರಾಮು, ‘100 ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ರಚಿಸಲಾದ ಆದೇಶದ ಆಧಾರದಲ್ಲಿ ಕಾವೇರಿ ನೀರು ಹಂಚಿಕೆ ಮಾಡಲಾಗುತ್ತಿದೆ. ಆದ್ದರಿಂದ ಸಂಕಷ್ಟ ಸೂತ್ರಗಳನ್ನು ರಚಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಮಠಾಧೀಶರು ಹಾಗೂ ರಾಜಕೀಯ ಪಕ್ಷದ ಮುಖಂಡರ ಸಲಹೆ ಸೂಚನೆ ಪಡೆದು, ಅಗತ್ಯ ಕ್ರಮ ಕೈಗೊಳ್ಳಲು ಸಮಿತಿ ಮುಂದಾಗಿದೆ’ ಎಂದು ಹೇಳಿದರು.

‘ಸಭಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದು, ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸಂಸದರಾದ ಡಾ.ಸಿ.ಎನ್. ಮಂಜುನಾಥ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಭಾಗವಹಿಸಲಿದ್ದಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎ.ಜೆ. ಸದಾಶಿವ, ಚಂದ್ರಶೇಖರಯ್ಯ ಉಪಸ್ಥಿತರಿರುತ್ತಾರೆ’ ಎಂದರು.

‘ಬೆಳಿಗ್ಗೆ 11.30ಕ್ಕೆ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಸಚಿವರಾದ ಎನ್. ಚಲುವರಾಯಸ್ವಾಮಿ, ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನೀಲ್ ಬೋಸ್ ಭಾಗವಹಿಸುತ್ತಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.