ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 20 ಸಾವಿರ ಲಂಚ; ರೈಲ್ವೆ ಇಲಾಖೆ ಅಧಿಕಾರಿ ಸಿಬಿಐ ಬಲೆಗೆ

Last Updated 28 ಆಗಸ್ಟ್ 2020, 21:38 IST
ಅಕ್ಷರ ಗಾತ್ರ

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಆರೋಪದಡಿ ಮೈಸೂರು ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ಅಧಿಕಾರಿ ಎಲ್‌.ಕೆ. ಶ್ರೀಕಾಂತ್ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

‘ಕೆಲಸ ಕೊಡಿಸಲು ₹ 1 ಲಕ್ಷಕ್ಕೆ ಆರೋಪಿ ಬೇಡಿಕೆ ಇಟ್ಟಿದ್ದರು. ₹ 25 ಸಾವಿರ ಮುಂಗಡವಾಗಿ ತೆಗೆದುಕೊಳ್ಳುವ ವೇಳೆಯಲ್ಲಿ ದಾಳಿ ಮಾಡಿ ಬಂಧಿಸಲಾಗಿದೆ’ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿದರು.

‘ಬೆಂಗಳೂರಿನ ನಿವಾಸಿಯೊಬ್ಬರು ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಸೇರಲು ಪ್ರಯತ್ನಿಸುತ್ತಿದ್ದರು. ಅವರಿಗೆ ಸಂಬಂಧಿಕರ ಮೂಲಕ ಶ್ರೀಕಾಂತ್‌ ಪರಿಚಯವಾಗಿತ್ತು. ಕೆಲಸ ಕೊಡಿಸಬೇಕಾದರೆ ಲಂಚ ನೀಡಬೇಕೆಂದು ಅಧಿಕಾರಿ ಬೇಡಿಕೆ ಇಟ್ಟಿದ್ದರು. ಆ ಬಗ್ಗೆ ಅಭ್ಯರ್ಥಿಯೇ ದೂರು ನೀಡಿದ್ದರು’

‘ಮೈಸೂರಿನಲ್ಲಿರುವ ರೈಲ್ವೆ ಇಲಾಖೆ ಕಚೇರಿಯಲ್ಲೇ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT