ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ. ಉಪ ಚುನಾವಣೆಗೂ ಈ ದಾಳಿಗೂ ಯಾವುದೇ ಸಂಬಂಧ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈಗಾಗಲೇ ಡಿ.ಕೆ.ಶಿವಕುಮಾರ್ ಅವರ ಮೇಲೆ ಆದಾಯ ತೆರಿಗೆ ಹಾಗೂ ಇಡಿ ದಾಳಿ ನಡೆದಿತ್ತು. ಅದರ ಮುಂದುವರಿದ ಭಾಗವಾಗಿ ಸಿಬಿಐ ದಾಳಿ ನಡೆದಿರಬಹುದು. ಹೀಗಾಗಿ ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ’ ಎಂದರು.

‘ಸಮಾಜದಲ್ಲಿ ವ್ಯಕ್ತಿಗಿಂತ ವ್ಯವಸ್ಥೆಯೇ ದೊಡ್ಡದು. ಇದರಲ್ಲಿ ನಂಬಿಕೆ ಹೆಚ್ಚುವ ರೀತಿಯಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸತ್ಯ ಏನೆಂದು ಹೊರಬರಲಿ. ಇನ್ನು ತನಿಖೆಗೆ ಸಹಕಾರ ನೀಡುವುದಾಗಿ ಸ್ವತಃ ಶಿವಕುಮಾರ್ ಹೇಳಿದ್ದಾರೆ. ಅದರಂತೆ ಅವರು ಸಹಕಾರ ನೀಡಲಿ. ತಮ್ಮ ಪ್ರಾಮಾಣಿಕತೆಯನ್ನು ಸಾಬೀತು ಮಾಡಲು ಇದೊಂದು ಅವಕಾಶ. ಸಿಕ್ಕಿದ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಳ್ಳಲಿ’ ಎಂದರು.

‘ಇಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಇದೊಂದು ರಾಜಕೀಯ ಪ್ರೇರಿತ ಎಂದು ಹೇಳುವ ಮೂಲಕ ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.