ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ

Last Updated 17 ನವೆಂಬರ್ 2020, 20:45 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ಪೆಡ್ಲರ್‌ಗಳ ಜೊತೆ ಸಂಪರ್ಕವಿಟ್ಟುಕೊಂಡು ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಮಾರ್ಕ್ ಹಾಗೂ ಹೆನ್ರಿ ಬಂಧಿತರು. ಅವರಿಂದ 6 ಮೊಬೈಲ್ ಹಾಗೂ ಪಾಸ್‌ಪೋರ್ಟ್ ಜಪ್ತಿ ಮಾಡಲಾಗಿದೆ. ಅವರಿಬ್ಬರು ಪೆಡ್ಲರ್‌ ಆಗಿ ಕೆಲಸ ಮಾಡುತ್ತಿದ್ದರು’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

‘ಅಕ್ಟೋಬರ್ 30ರಂದು ನೈಜೀರಿಯಾದ ಪೆಡ್ಲರ್ ಸನ್ನಿ ಎಂಬಾತನನ್ನು ಬಂಧಿಸಲಾಗಿತ್ತು. ಆತನಿಂದ ಕೊಕೇನ್ ಜಪ್ತಿ ಮಾಡಲಾಗಿತ್ತು. ಆತ ನೀಡಿದ್ದ ಸುಳಿವು ಆಧರಿಸಿ ಇದೀಗ ಮಾರ್ಕ್ ಹಾಗೂ ಹೆನ್ರಿಯನ್ನು ಸೆರೆ ಹಿಡಿಯಲಾಗಿದೆ. ಈ ಮೂವರು ಸೇರಿಕೊಂಡು ನಗರದ ಹಲವರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಸಂಗತಿ ತನಿಖೆಯಿಂದ ಹೊರಬಿದ್ದಿದೆ’ ಎಂದೂ ಅವರು ತಿಳಿಸಿದರು.

'ಆರೋಪಿಗಳು, ಹಲವು ವರ್ಷಗಳಿಂದ ನಗರದಲ್ಲಿ ಡ್ರಗ್ಸ್‌ ಸಾಗಣೆ ಹಾಗೂ ಮಾರಾಟ ಮಾಡುತ್ತಿದ್ದರು. ಮಾರ್ಕ್ ಬಳಿ ಮಾತ್ರ ಪಾಸ್‌ಪೋರ್ಟ್ ಇದೆ. ಹೆನ್ರಿ ಬಳಿ ಇಲ್ಲ' ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT