ಮಂಗಳವಾರ, ಮಾರ್ಚ್ 21, 2023
29 °C

ಡಿ.ಜೆ.ಹಳ್ಳಿ ಗಲಭೆ ಪ್ರಕರಣ| ಮಾಜಿ ಮೇಯರ್‌ ಸಂಪತ್‌ರಾಜ್‌ಗೆ ಸಿಸಿಬಿ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮೇಯರ್‌ ಸಂಪತ್ ರಾಜ್ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ.

ಈ ಹಿಂದೆಯೂ ಸಂಪತ್ ರಾಜ್ ಅವರು ಸಿಸಿಬಿ ವಿಚಾರಣೆ ಎದುರಿಸಿದ್ದರು. ಕೆಲ ಮಾಹಿತಿ ಕಲೆಹಾಕಿದ್ದ ಪೊಲೀಸರು, ಪುನಃ ವಿಚಾರಣೆಗೆ ಕರೆಸುವುದಾಗಿ ಹೇಳಿದ್ದರು. ಇದೀಗ ಎರಡನೇ ಬಾರಿ ನೋಟಿಸ್‌ ನೀಡಿದ್ದು, ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್‌ಕುಮಾರ್‌ನನ್ನು ಈಗಾಗಲೇ ಬಂಧಿಸಲಾಗಿದೆ. ಆತನ ಹೇಳಿಕೆ ಆಧರಿಸಿ ಸಂಪತ್ ರಾಜ್ ಅವರಿಗೆ ನೋಟಿಸ್‌ ನೀಡಿರುವುದಾಗಿ ಗೊತ್ತಾಗಿದೆ.

‘ಶುಕ್ರವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸಂಪತ್ ರಾಜ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿಯ ಹಿರಿಯ ಅಧಿಕಾರಿಗಳು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು