ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಎರಡು ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ಗಳ ಬಂಧನ

Published 21 ಜನವರಿ 2024, 14:04 IST
Last Updated 21 ಜನವರಿ 2024, 14:04 IST
ಅಕ್ಷರ ಗಾತ್ರ

ಬೆಂಗಳೂರು: ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ, ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸಂಘಟಿತ ಅಪರಾಧ ದಳದ(ಪಶ್ಚಿಮ) ಪೊಲೀಸರು ಶನಿವಾರ ಬಂಧಿಸಲು ಯಶಸ್ವಿಯಾಗಿದ್ದಾರೆ.

ಪುಟ್ಟೇನಹಳ್ಳಿ ಠಾಣೆ ರೌಡಿಶೀಟರ್‌ಗಳಾದ ಪವನ್(23) ಹಾಗೂ ಮನೋಜ್ ಅಲಿಯಾಸ್ ಸಿ.ಜೆ.(23) ಬಂಧಿತರು.

ಎರಡು ವರ್ಷಗಳ ಹಿಂದೆ ತಿಲಕನಗರದಲ್ಲಿ ನಡೆದಿದ್ದ ಘಟನೆಯಲ್ಲಿ ರೌಡಿಶೀಟರ್‌ಗಳಿಬ್ಬರು ಹಳೆ ದ್ವೇಷದಿಂದ ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿದ್ದರೂ ಆರೋಪಿಗಳು ಪೊಲೀಸರಿಗೆ ಸಿಕ್ಕಿರಲಿಲ್ಲ. ತಿಲಕನಗರ ಠಾಣೆ ಪೊಲೀಸರು ಆರೋಪಿಗಳು ತಲೆಮರೆಸಿಕೊಂಡಿರುವ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಇದೀಗ ಇಬ್ಬರನ್ನೂ ಬಂಧಿಸಿರುವ ಸಿಸಿಬಿ ಪೊಲೀಸರು, ತಿಲಕನಗರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಪವನ್ ವಿರುದ್ದ ಈ ಹಿಂದೆ ಪುಟ್ಟೇನಹಳ್ಳಿ ಠಾಣೆಯಲ್ಲಿ ಹಲ್ಲೆ ಹಾಗೂ ಡಕಾಯಿತಿ, ಕೋಣನಕುಂಟೆ ಠಾಣೆಯಲ್ಲಿ ಕೊಲೆ ಪ್ರಕರಣ, ತಿಲಕನಗರ ಠಾಣೆಯಲ್ಲಿ ಕೊಲೆಗೆ ಯತ್ನ ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT