ಶುಕ್ರವಾರ, ಅಕ್ಟೋಬರ್ 30, 2020
27 °C

ಸಿಸಿಬಿ ಪೊಲೀಸ್ ಹೆಸರಿನಲ್ಲಿ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಿಸಿಬಿ ಪೊಲೀಸ್ ಎಂದು ಹೇಳಿಕೊಂಡಿದ್ದ ನಾಗರಾಜ್ ಎಂಬಾತ, ನನ್ನಿಂದ ₹ 5 ಸಾವಿರ ಪಡೆದು ವಂಚಿಸಿದ್ದಾನೆ’ ಎಂದು ಆರೋಪಿಸಿ ಶರತ್‌ ಎಂಬುವರು ಅನ್ನಪೂರ್ಣೇಶ್ವರಿನಗರ ಠಾಣೆಗೆ ದೂರು ನೀಡಿದ್ದಾರೆ.

‘ಅತ್ತಿಗುಪ್ಪೆ ನಿವಾಸಿ ಶರತ್ ನೀಡಿರುವ ದೂರು ಆಧರಿಸಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆಟೊಮೊಬೈಲ್ ಮಳಿಗೆಯಲ್ಲಿ ಶರತ್‌ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿದ್ದ ಶರಣಬಸವ ಎಂಬಾತ ₹ 90 ಸಾವಿರ ಪಡೆದು ವಂಚಿಸಿದ್ದ. ಅದನ್ನು ತಿಳಿದುಕೊಂಡಿದ್ದ ನಾಗರಾಜ್, ‘ನಾನು ಸಿಸಿಬಿ ಪೊಲೀಸ್. ಶರಣಬಸವನನ್ನು ಬಂಧಿಸಿ ಹಣ ವಾಪಸು ಕೊಡಿಸುತ್ತೇನೆ. ಸ್ವಲ್ಪ ಹಣ ಖರ್ಚಾಗುತ್ತದೆ’ ಎಂದಿದ್ದ. ನಂತರ, ₹ 5 ಸಾವಿರ ಪಡೆದು ನಾಪತ್ತೆಯಾಗಿದ್ದಾನೆ. ಈ ಸಂಗತಿ ದೂರಿನಲ್ಲಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು