ಸೋಮವಾರ, ಜುಲೈ 4, 2022
22 °C

₹5 ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಪೆಡ್ಲರ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪೆಡ್ಲರ್‌ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. 

‘ಆರೋಪಿಯು ಬೇಗೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ. ಈತನಿಂದ 5 ಕೆ.ಜಿ.ಗಾಂಜಾ, ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹5 ಲಕ್ಷ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪೆಡ್ಲರ್‌ ತಲೆಮರೆಸಿಕೊಂಡಿದ್ದಾನೆ. ಆತ ಆಂಧ್ರಪ್ರದೇಶದವನು. ಅವನಿಂದಲೇ ಬಂಧಿತ ಆರೋಪಿ ಮಾದಕ ವಸ್ತು ಖರೀದಿಸುತ್ತಿದ್ದ. ಅದನ್ನು 20 ಗ್ರಾಮ್‌ಗಳಂತೆ ವಿಂಗಡಿಸಿ ಪೊಟ್ಟಣಗಳಲ್ಲಿ ತುಂಬುತ್ತಿದ್ದ. ಪರಿಚಿತರು, ಕಾಲೇಜು ವಿದ್ಯಾರ್ಥಿಗಳು, ನಗರದಲ್ಲಿ ನೆಲೆಸಿರುವ ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ. ಪ್ರತಿ ಪೊಟ್ಟಣಕ್ಕೆ ₹1,500ರಿಂದ ₹2 ಸಾವಿರದವರೆಗೆ ದರ ನಿಗದಿ ಮಾಡುತ್ತಿದ್ದ. ಈತನ ವಿರುದ್ಧ ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು