ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲಿ ಡ್ರಗ್ಸ್ ತಯಾರಿ: ಸಿಸಿಬಿ ದಾಳಿ, ₹2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

Last Updated 16 ಸೆಪ್ಟೆಂಬರ್ 2021, 6:12 IST
ಅಕ್ಷರ ಗಾತ್ರ

ಬೆಂಗಳೂರು: ಬಾಡಿಗೆ ಮನೆಯಲ್ಲೇ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ₹2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಪ್ರಕರಣದ ಪ್ರಮುಖ ಆರೋಪಿ ನೈಜೀರಿಯಾ ಪ್ರಜೆಯನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

‘ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ‌ ಮನೆಯೊಂದರಲ್ಲಿ ಆರೋಪಿ ಬಾಡಿಗೆಗೆ ಇದ್ದ.‌ ನಗರದ ಮಾರುಕಟ್ಟೆ ಹಾಗೂ ಆನ್‌ಲೈನ್ ಮೂಲಕ ರಾಸಾಯನಿಕ ಖರೀದಿಸುತ್ತಿದ್ದ. ಅದನ್ನೇ ಬಳಸಿಕೊಂಡು ಎಂಡಿಎಂಎ ಮಾತ್ರೆಗಳನ್ನು ತಯಾರಿಸುತ್ತಿದ್ದ. ಇದೇ ಮಾತ್ರೆಗಳನ್ನು ನಗರದಲ್ಲಿ ಹಾಗೂ ವಿದೇಶಗಳಿಗೆ ಕೋರಿಯರ್‌ ಮೂಲಕ ಕಳುಹಿಸುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ‌ ಖಾಸಗಿ ಕಂಪನಿ ಉದ್ಯೋಗಿಗಳು ಗ್ರಾಹಕರಾಗಿದ್ದರು’ ಎಂದರು.

‘ಡ್ರಗ್ಸ್ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT