ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ₹ 52.78 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

Published 23 ಡಿಸೆಂಬರ್ 2023, 23:30 IST
Last Updated 23 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆಯ ಕೆಲ ಪಾರ್ಟಿಗಳಿಗೆ ಪೂರೈಸಲು ಸಂಗ್ರಹಿಸಿದ್ದ ₹52.78 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವ ಸಿಸಿಬಿ ಪೊಲೀಸರು, ವಿದೇಶಿ ಪ್ರಜೆ ಸೇರಿ ಮೂವರನ್ನು ಬಂಧಿಸಿದ್ದಾರೆ.

‘ಬೇಗೂರು ಹಾಗೂ ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ಆಫ್ರಿಕಾ ಪ್ರಜೆ ಹಾಗೂ ಕೇರಳದ ಇಬ್ಬರನ್ನು ಸೆರೆ ಹಿಡಿಯಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟುಕೊಳ್ಳುತ್ತಿರುವ ಪೆಡ್ಲರ್‌ಗಳು, ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ಯೋಚಿಸುತ್ತಿದ್ದಾರೆ. ಇಂಥ ಪೆಡ್ಲರ್‌ಗಳ ಬಗ್ಗೆ ಮಾಹಿತಿ ಕಲೆಹಾಕಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿವೆ.

‘ಮೂರು ತಿಂಗಳಿನಿಂದ ನಗರದಲ್ಲಿ ವಾಸವಿದ್ದ ಆಫ್ರಿಕಾ ಪ್ರಜೆ, ತಮ್ಮದೇ ದೇಶದ ಪೆಡ್ಲರ್‌ ಕಡೆಯಿಂದ ಡ್ರಗ್ಸ್ ಖರೀದಿಸಿದ್ದರು. ಅದನ್ನು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದರು. ಕೇರಳದ ಇಬ್ಬರು ಸಹ ಮನೆಯಲ್ಲಿ ಡ್ರಗ್ಸ್ ಇರಿಸಿಕೊಂಡಿದ್ದರು’ ಎಂದು ಸಿಸಿಬಿ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT