ಬೆಂಗಳೂರು: ಮಹದೇವಪುರ, ಆಡುಗೋಡಿ, ಸಿದ್ದಾಪುರ, ಕೆ.ಜಿ. ನಗರ ಹಾಗೂ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿ ಏಳು ಮಂದಿಯನ್ನು ಸಿಸಿಬಿ ಮಾದಕ ದ್ರವ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು 3 ಕೆ.ಜಿ 858 ಗ್ರಾಂ ಎಂಡಿಎಂಎ ಕ್ರಿಸ್ಟಲ್, 41 ಗ್ರಾಂ ಎಕ್ಸ್ಟಸಿ ಪಿಲ್ಸ್, 1 ಕೆ.ಜಿ 82 ಗ್ರಾಂ ಹೈಡ್ರೊಗಾಂಜಾ, 6 ಕೆ.ಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಕಾರು, ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

ಹೆಬ್ಬಗೋಡಿ ಠಾಣೆಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನೈಜೀರಿಯಾದ ಥಾಮಸ್ ನೋವಿಡ್ ಚಿಮೆ ಹಾಗೂ ನಿಗ್ಯು ಕಿಂಗ್ಸ್ಲೇ ಚಿಕ್ಮೇಕಾ ಎಂಬುವರನ್ನು ಬಂಧಿಸಲಾಗಿದೆ.

ಬಂಧಿತರಿಂದ ₹7.80 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಹಾಗೂ ಎಕ್ಸ್ಟಸಿ ಪಿಲ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ತಮಗೆ ಗೊತ್ತಿದ್ದವರಿಂದ ಎಂಡಿಎಂಎ ಕ್ರಿಸ್ಟಲ್ ಹಾಗೂ ಎಕ್ಸ್ಟಸಿ ಪಿಲ್ಸ್ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಥಾಮಸ್ ನೋವಿಡ್ ಚಿಮೆ 2019ರಲ್ಲಿ ವೈದ್ಯಕೀಯ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ. ದೆಹಲಿಯಲ್ಲಿ ವಾಸವಿದ್ದ ವಿದೇಶಿ ಪ್ರಜೆಗಳಿಂದ ಡ್ರಗ್ಸ್ ಖರೀದಿಸಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಆರೋಪಿಯ ವಿರುದ್ಧ 2022ರಲ್ಲಿ ಎನ್ಸಿಬಿ ಘಟಕದಲ್ಲಿ ಎನ್ಡಿಪಿಎಸ್ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿತ್ತು. ನಿಗ್ಯು ಕಿಂಗ್ಸ್ಲೇ ಚಿಕ್ಮೇಕಾ 2019ರಲ್ಲಿ ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದಿದ್ದ. ಆನ್ಲೈನ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿ ಈತನನ್ನು ಗುಜರಾತ್ ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಗುಜರಾತ್ನ ಎರಡು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಜಾಮೀನಿನ ಮೇಲೆ ಬಿಡುಗಡೆಯಾಗಿ ಬೆಂಗಳೂರಿಗೆ ಬಂದು, ಡ್ರಗ್ಸ್ ಪೆಡ್ಲಿಂಗ್ನಲ್ಲಿ ತೊಡಗಿದ್ದ’ ಎಂದು ಪೊಲೀಸರು ಹೇಳಿದರು.

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್ ಉದ್ಯೋಗಿ ಕೇವಿನ್ ರೋಜರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೋಜಿನ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಹೈಡ್ರೊಗಾಂಜಾ ತಂದು ನಗರದ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ. ಆರೋಪಿಯಿಂದ 500 ಗ್ರಾಂ ಹೈಡ್ರೊಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಕಾರು, ಬೈಕ್ ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಡೆಂಟಲ್ ಕಾಲೇಜು ವಿದ್ಯಾರ್ಥಿ ರಂಜಿತ್ ಆ್ಯಂಥೋನಿ ಎಂಬಾತನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 300 ಗ್ರಾಂ ಹೈಡ್ರೊಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ವಿದೇಶಿ ಅಂಚೆ ಕಚೇರಿಗೆ ಪಾರ್ಸಲ್ ಮೂಲಕ ಬಂದಿದ್ದ ₹1 ಕೋಟಿ ಮೌಲ್ಯದ ಮಾದಕ ಪದಾರ್ಥಗಳನ್ನು ಕೆ.ಜಿ.ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಒಂದು ಕೆ.ಜಿ 22 ಗ್ರಾಂ ಹೈಡ್ರೊಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪಾರ್ಸಲ್ ಬುಕ್ ಮಾಡಿದ್ದ ಆರೋಪಿ ಸುರೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.