ಗುರುವಾರ , ಜೂಲೈ 2, 2020
28 °C
ಸಿಸಿಬಿ ಪೊಲೀಸರಿಂದ ಕಾರ್ಯಾಚರಣೆ

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆಗೆ ಸಂಚು: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಬಿಇಎಲ್‌ ಎರಡನೇ ಹಂತದ ಭರತ್‌ ನಗರದ ಪಾರ್ಕ್‌ ಬಳಿಯಿಂದ ಕೇಂದ್ರ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.

ರಾಜಗೋಪಾಲನಗರದ ನಿವಾಸಿಗಳಾದ ಅಮರ್‌ನಾಥ್‌ (31), ಶಿವರಾಜ್‌ (32), ಕೆ.ಪಿ. ಅಗ್ರಹಾರದ ಶಾಂತರಾಜು (27) ಮತ್ತು ಶ್ರೀನಿವಾಸ ಬಂಧಿತರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಅಮರ್‌ನಾಥ್‌ ವಿರುದ್ಧ ಸಂಜಯನಗರ ಮತ್ತು ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ರಾಬರಿ ಪ್ರಕರಣ, ರಾಜಗೋಪಾಲನಗರ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿದೆ. ಶಿವರಾಜ್ ವಿರುದ್ಧ ತಾವರೆಕೆರೆ ಠಾಣೆಯಲ್ಲಿ ಕೊಲೆ ಪ್ರಕರಣ, ಕೊಡಿಗೇಹಳ್ಳಿ ಠಾಣೆಯಲ್ಲಿ ರಾಬರಿ ಪ್ರಕರಣ ಮತ್ತು ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ದರೋಡಯತ್ನ ಪ್ರಕರಣ ದಾಖಲಾಗಿದೆ.

‘ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ಹಲವು ಬಾರಿ ವಿವಿಧ ನ್ಯಾಯಾಲಯಗಳು ವಾರಂಟ್‌ ಜಾರಿ ಮಾಡಿವೆ. ಆದರೆ, ಕೈಗೆ ಸಿಗದೆ ತಲೆರೆಸಿಕೊಂಡು ಓಡಾಡುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು