ಮಂಗಳವಾರ, ಅಕ್ಟೋಬರ್ 27, 2020
18 °C

ಸ್ಪಾ, ಪಾರ್ಲರ್ ಮೇಲೆ ದಾಳಿ; ಯುವತಿಯರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಮಮೂರ್ತಿನಗರ, ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿರುವ ಸ್ಪಾ ಹಾಗೂ ಬ್ಯೂಟಿ ಪಾರ್ಲೊಂದರ ಮೇಲೆ ದಾಳಿ ಮಾಡಿದ್ದ ಸಿಸಿಬಿ ಪೊಲೀಸರು. ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ 12 ಯುವತಿಯರನ್ನು ರಕ್ಷಿಸಿದ್ದಾರೆ.

‘ಸ್ಪಾ ಹಾಗೂ ಬ್ಯೂಟಿ ಪಾರ್ಲರ್‌ ಮಾಲೀಕರು ಮತ್ತು ಕೆಲಸಗಾರರನ್ನು ಬಂಧಿಸಲಾಗಿದೆ. ಮೊಬೈಲ್ ಸೇರಿ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ರಾಮಮೂರ್ತಿನಗರ ಹಾಗೂ ವಿವೇಕನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

‘ಹೊರ ರಾಜ್ಯದ ಯುವತಿಯರಿಗೆ ಕೆಲಸದ ಆಮಿಷವೊಡ್ಡಿ ನಗರಕ್ಕೆ ಕರೆಸಿಕೊಳ್ಳಲಾಗುತ್ತಿತ್ತು. ಸ್ಪಾ ಹಾಗೂ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸಕ್ಕೆ ಇಟ್ಟುಕೊಂಡು, ವೇಶ್ಯಾವಾಟಿಕೆಗೆ ಪ್ರಚೋದಿಸಲಾಗುತ್ತಿತ್ತು. ಮೊಬೈಲ್ ಕರೆ ಹಾಗೂ ಆ್ಯಪ್‌ ಮೂಲಕ ಗ್ರಾಹಕರನ್ನು ಆಹ್ವಾನಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಯಿತು’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.