ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಮನೆ ಮೇಲೆ ಸಿಸಿಬಿ ದಾಳಿ: ₹2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

Published 21 ಅಕ್ಟೋಬರ್ 2023, 14:22 IST
Last Updated 21 ಅಕ್ಟೋಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ದೊಡ್ಡ ನಾಗಮಂಗಲದ ವೀರಭದ್ರಸ್ವಾಮಿ ಬಡಾವಣೆಯಲ್ಲಿರುವ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ₹2.04 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಮನೆಯಲ್ಲಿ ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡು ಪರಿಚಯಸ್ಥ ಗ್ರಾಹಕರಿಗೆ ಮಾರಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ನೈಜೀರಿಯಾದ ವಿಕ್ಟರ್ ಒಬಿನ್ನಾ ಚುಕ್ವುಡಿ ಬಂಧಿತ. ಈತನಿಂದ 2 ಕೆ.ಜಿ 43 ಗ್ರಾಂ ಎಂಡಿಎಂಎ ಡ್ರಗ್ಸ್, ಎರಡು ಮೊಬೈಲ್, ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿವೆ.

ದೆಹಲಿಯಿಂದ ಡ್ರಗ್ಸ್ ತರಿಸುತ್ತಿದ್ದ: ‘ಆರೋಪಿ ವಿಕ್ಟರ್ ಹಲವು ವರ್ಷಗಳ ಹಿಂದೆಯೇ ನಗರಕ್ಕೆ ಬಂದಿದ್ದಾನೆ. ವೀರಭದ್ರಸ್ವಾಮಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ನೈಜೀರಿಯಾದ ಪೆಡ್ಲರ್ ಮೆಸ್ಸೊ ಎಂಬಾತ ದೆಹಲಿಯಲ್ಲಿದ್ದಾನೆ. ಆತನ ಜೊತೆ ಒಡನಾಟವಿಟ್ಟುಕೊಂಡಿದ್ದ ವಿಕ್ಟರ್, ಡ್ರಗ್ಸ್ ತರಿಸುತ್ತಿದ್ದ. ಅದನ್ನು ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡು, ಪೊಟ್ಟಣಗಳಲ್ಲಿ ತುಂಬಿ ಮಾರುತ್ತಿದ್ದರು. ಹಲವು ಪಾರ್ಟಿಗಳಿಗೂ ಡ್ರಗ್ಸ್ ಪೂರೈಸುತ್ತಿದ್ದ ಮಾಹಿತಿ ಇದೆ. ಮೆಸ್ಸೊ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT